Friday, November 13, 2026
Homeಕರಾವಳಿಮಂಗಳೂರುಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರು ಪೊಲೀಸ್ ವಶಕ್ಕೆ

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರು ಪೊಲೀಸ್ ವಶಕ್ಕೆ

- Advertisement -
- Advertisement -

ಮಂಗಳೂರು: ಯಾವುದೇ ಅಧಿಕೃತ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಂಗ್ಲಾದೇಶ ಮೂಲದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ವಶಕ್ಕೆ ಪಡೆಯಲಾದ ವಲಸಿಗರು. ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಣಂಬೂರು ಪೊಲೀಸ್ ನಿರೀಕ್ಷಕರಿಗೆ ಲಭ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿರುವುದು ದೃಢಪಟ್ಟಿದೆ. ಇಬ್ಬರನ್ನೂ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ಎಫ್‌ಆರ್‌ಆರ್‌ಒ (FRRO) ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲು ಪಣಂಬೂರು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪಣಂಬೂರು ಠಾಣಾ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ಸಿಬ್ಬಂದಿ ಇಮ್ತಿಯಾಝ್, ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.

- Advertisement -

Latest News

error: Content is protected !!