- Advertisement -


- Advertisement -
ಉಡುಪಿ: ಹೃದಯಾಘಾತದಿಂದ ನಿಧನರಾದ ತಾಯಿ ಸುಶೀಲಾ ಪೂಜಾರ್ತಿ (86) ಅವರ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿ ಇಂದು ಉಡುಪಿಗೆ ಆಗಮಿಸಿದ್ದಾರೆ.
ನ್ಯಾಯಾಲಯದ ವಿಶೇಷ ಅನುಮತಿಯ ಮೇರೆಗೆ, ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ರವಿ ಪೂಜಾರಿಯನ್ನು ಬೆಂಗಳೂರಿನಿಂದ ಉಡುಪಿಗೆ ಕರೆತರಲಾಗಿದೆ. ಮಲ್ಪೆಯ ನೆರ್ಗಿಯಲ್ಲಿರುವ ಅವರ ಹಿರಿಯ ಮನೆಯಲ್ಲಿ ಇಂದು ಅಂತ್ಯಸಂಸ್ಕಾರದ ವಿಧಿವಿಧಾನಗಳು ನಡೆಯಲಿವೆ.
ಮೃತ ಸುಶೀಲಾ ಪೂಜಾರ್ತಿ ಅವರು ಇಬ್ಬರು ಪುತ್ರಿಯರು ಹಾಗೂ ರವಿ ಪೂಜಾರಿ ಸೇರಿದಂತೆ ಮೂವರು ಪುತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯ ಎಲ್ಲಾ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ, ರವಿ ಪೂಜಾರಿಯನ್ನು ಪೊಲೀಸರು ಮತ್ತೆ ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಕರೆದೊಯ್ಯಲಿದ್ದಾರೆ.
- Advertisement -


