Monday, November 16, 2026
Homeಕರಾವಳಿಮಂಗಳೂರುಕೇಂದ್ರ ಸರ್ಕಾರದ ಕೈಗಾರಿಕಾ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಕುಟುಂಬಿಕರಾಗಿ ಧರ್ಮಸ್ಥಳ ಭೇಟಿ

ಕೇಂದ್ರ ಸರ್ಕಾರದ ಕೈಗಾರಿಕಾ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಕುಟುಂಬಿಕರಾಗಿ ಧರ್ಮಸ್ಥಳ ಭೇಟಿ

- Advertisement -
- Advertisement -

ಬೆಳ್ತಂಗಡಿ: ಕೇಂದ್ರಸರ್ಕಾರದ ಕೈಗಾರಿಕಾ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಸಕುಟುಂಬಿಕರಾಗಿ ನ.16 ರಂದು ಸೋಮವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಧರ್ಮಸ್ಥಳಕ್ಕೆ ಆಗಮಿಸಿದ ಅವರನ್ನು ಪೂರ್ಣಕುಂಭದೊಂದಿಗೆ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.

ಬಳಿಕ ಅವರು ದೇವರ ದರ್ಶನ ಪಡೆದು, ರಾತ್ರಿ “ರಂಗಪೂಜೆ” ಸೇವೆಯನ್ನು ಸಲ್ಲಿಸಿದರು. ಸಚಿವರ ಪತ್ನಿ ಅನಿತಾಕುಮಾರಸ್ವಾಮಿ, ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಸೊಸೆ ರೇವತಿ ನಿಖಿಲ್ ಜೊತೆಗಿದ್ದರು. ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇ ಗೌಡ ಉಪಸ್ಥಿತರಿದ್ದರು. “ಶ್ರೀಸನ್ನಿಧಿ” ಅತಿಥಿಗೃಹದಲ್ಲಿ ತಂಗಿರುವ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಕಟುಂಬದವರು ನ.17 ರ ಮಂಗಳವಾರ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳಲಿದ್ದಾರೆ.

- Advertisement -

Latest News

error: Content is protected !!