- Advertisement -


- Advertisement -
ಮೂಲ್ಕಿ: ಹಳೆಯಂಗಡಿ ಜಂಕ್ಷನ್‌ನಲ್ಲಿ ಕಾರಿಗೆ ಹಿಂದಿನಿಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ನಡೆದಿದೆ.
ಆರ್. ಶ್ರೀಕಾಂತ್ ಅವರು ಕುಟುಂಬ ಸಮೇತರಾಗಿ ತ್ರಿಶೂರಿನಿಂದ ಉಡುಪಿಯತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಳೆಯಂಗಡಿ ಜಂಕ್ಷನ್ ತಲುಪಿದ್ದಾರೆ. ಈ ವೇಳೆ ಅದೇ ರಸ್ತೆಯಲ್ಲಿ ಹಿಂದಿನಿಂದ ಅತಿವೇಗವಾಗಿ ಬಂದ ಲಾರಿಯನ್ನು ಚಾಲಕ ಲಿಂಗರಾಜು ಚಲಾಯಿಸಿಕೊಂಡು ಬಂದು ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಪಘಾತದ ಪರಿಣಾಮ ಕಾರಿಗೆ ಹಾನಿಯಾಗಿದೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


