Tuesday, November 17, 2026
Homeಕರಾವಳಿಮಂಗಳೂರುಕುಟುಂಬ ಸಮೇತ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಕುಟುಂಬ ಸಮೇತ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

- Advertisement -
- Advertisement -

ಸುಬ್ರಹ್ಮಣ್ಯ : ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿಗೆ ನವೆಂಬರ್ 17 ರಂದು ಭೇಟಿ ನೀಡಿ, ದೇವರ ದರ್ಶನ ಪಡೆದರು.

ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ಅವರೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರು, ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ನಾಡಿಗೆ ಶುಭವಾಗಲಿ ಹಾಗೂ ಎಲ್ಲೆಡೆ ಸುಖ, ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ ನೆಲೆಸಲಿ ಎಂದು ದೇವರಲ್ಲಿ ಅರಿಕೆ ಮಾಡಿಕೊಂಡರು.

ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಜೆಡಿಎಸ್ ಮುಖಂಡರು ಕೇಂದ್ರ ಸಚಿವರು ಮತ್ತು ಅವರ ಕುಟುಂಬಸ್ಥರನ್ನು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದರು.

- Advertisement -

Latest News

error: Content is protected !!