Saturday, June 13, 2026
Homeತಾಜಾ ಸುದ್ದಿಡಿಜೆ ಹಳ್ಳಿ ಗಲಭೆ ಪ್ರಕರಣ: ಫೇಸ್‌ಬಕ್‌ನಲ್ಲಿ ಪೋಸ್ಟ್‌ ಮಾಡಿದ್ದ ನಟ ಪ್ರಥಮ್‌ಗೆ ಜೀವ ಬೆದರಿಕೆ

ಡಿಜೆ ಹಳ್ಳಿ ಗಲಭೆ ಪ್ರಕರಣ: ಫೇಸ್‌ಬಕ್‌ನಲ್ಲಿ ಪೋಸ್ಟ್‌ ಮಾಡಿದ್ದ ನಟ ಪ್ರಥಮ್‌ಗೆ ಜೀವ ಬೆದರಿಕೆ

- Advertisement -
- Advertisement -

ಬೆಂಗಳೂರು: ಕೆಜಿ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಕ್ಕೆ ವಾಟ್ಸಾಪ್ ಮತ್ತು ಫೋನ್ ಕಾಲ್ ನಲ್ಲಿ ‘ಬಿಗ್ ಬಾಸ್’ ವಿನ್ನರ್ ಪ್ರಥಮ್ ಗೆ ವಾರ್ನಿಂಗ್ ಮಾಡಲಾಗಿದೆ. ಇದು ಹೀಗೆ ಮುಂದುವರೆದರೆ ಕಮೀಷನರ್ ಗೆ ಮತ್ತು ಗೃಹ ಸಚಿವರಿಗೆ ದೂರು ಕೊಡುತ್ತೇನೆ ಎಂದು ನಟ ಪ್ರಥಮ್ ಹೇಳಿದ್ದಾರೆ.

ಕೆಜಿ ಹಳ್ಳಿ ಗಲಾಟೆ ಬಗ್ಗೆ ಫೇಸ್ಬುಕ್ನಲ್ಲಿ ಪ್ರಥಮ್ ಪೋಸ್ಟ್ ಮಾಡಿದ್ದಾರೆ. ಅವರ ಪೋಸ್ಟ್ ನಿಂದಾಗಿ ಸೋಷಿಯಲ್ ಮೀಡಿಯಾದಲ್ಲಿ ವಾರ್ ಶುರುವಾಗಿದೆ. ಪೋಸ್ಟ್ ಸಮಾಜದಲ್ಲಿ ಶಾಂತಿ ಕದಡುತ್ತದೆ ಎಂದು ಹೇಳಲಾಗಿದೆ.

ಒಂದು ಸಮುದಾಯವನ್ನು ಅವಹೇಳನ ಮಾಡುವಂತೆ ಇದೆ ಎಂದು ಹೇಳುತ್ತಿದ್ದಂತೆ ಪ್ರಥಮ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಮುಸ್ಲಿಂ ಸ್ನೇಹಿತರ ಮಾತಿಗೆ ಬೆಲೆಕೊಟ್ಟು ಪೋಸ್ಟ್ ಡಿಲೀಟ್ ಮಾಡಿದ್ದೇನೆ. ಭಯದಿಂದ ಡಿಲೀಟ್ ಮಾಡಿಲ್ಲ. ಆದರೂ ಕೆಲವು ವಿಕೃತರು ಅಸಭ್ಯವಾಗಿ ಮೆಸೇಜ್, ಕಾಲ್ ಮಾಡುತ್ತಿದ್ದು ಬೆದರಿಕೆ ಹಾಕುತ್ತಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಪ್ರಥಮ್ ತಿಳಿಸಿದ್ದಾರೆ. ದೂರು ನೀಡಿದರೆ ನಿಮ್ಮ ಕುಟುಂಬದವರಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಸುಮ್ಮನಿದ್ದೇನೆ ಎಂದೂ ಹೇಳಿದ್ದಾರೆ.

https://www.facebook.com/iamOlleHudgaPratham/posts/1587334991434134

- Advertisement -

Latest News

error: Content is protected !!