Tuesday, November 17, 2026
Homeಕರಾವಳಿಕಾಂಗ್ರೆಸ್ ಪಕ್ಷದ ಮೂವರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಕಾಂಗ್ರೆಸ್ ಪಕ್ಷದ ಮೂವರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

- Advertisement -
- Advertisement -

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ದಾಂತಗಳನ್ನು ಒಪ್ಪಿ, ಪ್ರಧಾನಿ ನರೇಂದ್ರ ಮೋದಿಜಿಯವರ ಆಡಳಿತ ವೈಖರಿಯನ್ನು ಮೆಚ್ಚಿ, ಶಾಸಕರಾದ ಶ್ರೀ ಹರೀಶ್ ಪೂಂಜರವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಮತ್ತು ಜನವಿರೋಧಿಗಳಿಗೆ ಹಾಗೂ ತಾಲೂಕು ಕಾಂಗ್ರೆಸ್ ನ ಅಸಮರ್ಥ ನಾಯಕತ್ವಕ್ಕೆ ಬೇಸತ್ತು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಾದ ಬಿಜು, ಶಿಜಿ ಹಾಗೂ ಪೌಲೋಸ್ ಅವರು ಶಾಸಕರ ಸಮ್ಮುಖದಲ್ಲಿ ನ.17 ರಂದು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಯಶವಂತ್ ಗೌಡ, ಪ್ರಧಾನ ಕಾರ್ಯದರ್ಶಿ ನಿರಂಜನ್ ಶೆಟ್ಟಿ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಗೌಡ, ಮಂಡಲ ಎಸ್.ಟಿ ಮೋರ್ಚಾ ಅಧ್ಯಕ್ಷರಾದ ರಾಜೇಶ್ ಎಂ.ಕೆ, ಪುದುವೆಟ್ಟು ಶಕ್ತಿಕೇಂದ್ರ ಅಧ್ಯಕ್ಷರಾದ ಪೂರ್ಣಾಕ್ಷ, ಕಾರ್ಯಕರ್ತರು ಉಪಸ್ಥಿತರಿದ್ದರು

- Advertisement -

Latest News

error: Content is protected !!