Tuesday, November 17, 2026
Homeಕರಾವಳಿಕಾವೂರು ಮುಖ್ಯ ರಸ್ತೆಯಲ್ಲಿ ಸ್ಕೂಟರ್ ಹಾಗೂ ಎರಡು ಬೈಕ್‌ಗಳ ನಡುವೆ ಅಪಘಾತ; ಸ್ಕೂಟರ್ ಸವಾರರಿಗೆ ಗಾಯ

ಕಾವೂರು ಮುಖ್ಯ ರಸ್ತೆಯಲ್ಲಿ ಸ್ಕೂಟರ್ ಹಾಗೂ ಎರಡು ಬೈಕ್‌ಗಳ ನಡುವೆ ಅಪಘಾತ; ಸ್ಕೂಟರ್ ಸವಾರರಿಗೆ ಗಾಯ

- Advertisement -
- Advertisement -

ಮಂಗಳೂರು: ನಗರದ ಕಾವೂರು ಮುಖ್ಯ ರಸ್ತೆಯಲ್ಲಿ ಸ್ಕೂಟರ್ ಹಾಗೂ ಎರಡು ಬೈಕ್‌ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸ್ಕೂಟರ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ಸಾರ್ವಜನಿಕರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಖ್ಯ ರಸ್ತೆಯಾಗಿದ್ದರೂ ಆ ಸಮಯದಲ್ಲಿ ವಾಹನ ಸಂಚಾರ ಕಡಿಮೆ ಇದ್ದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಪಘಾತದಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!