- Advertisement -


- Advertisement -
ಮಂಗಳೂರು;ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸರ್ವಿಸ್ ರಸ್ತೆಗೆ ನುಗ್ಗಿ ಪಾದಚಾರಿಗೆ ಡಿಕ್ಕಿ ಹೊಡೆದು, ಬಳಿಕ ಸಮೀಪದ ತೋಡಿಗೆ ಉರುಳಿ ಬಿದ್ದ ಘಟನೆ ಇಲ್ಲಿ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕಾರು ಸುರತ್ಕಲ್ ಬಳಿ ಏಕಾಏಕಿ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಿಂದ ಪಕ್ಕದ ಸರ್ವಿಸ್ ರಸ್ತೆಗೆ ನುಗ್ಗಿದೆ. ಈ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಿಖಿಲ್ ಎಂಬವರಿಗೆ ಕಾರು ಡಿಕ್ಕಿ ಹೊಡೆದಿದ್ದು, ರಭಸಕ್ಕೆ ಕಾರು ಸಮೀಪದ ತೋಡಿಗೆ ಉರುಳಿ ಬಿದ್ದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪಾದಚಾರಿ ನಿಖಿಲ್ ಅವರನ್ನು ತಕ್ಷಣವೇ ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
- Advertisement -


