Thursday, November 19, 2026
Homeಕರಾವಳಿಮಂಗಳೂರುಪುತ್ತೂರು: ನಿಲ್ಲಿಸಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಪುತ್ತೂರು: ನಿಲ್ಲಿಸಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

- Advertisement -
- Advertisement -

ಪುತ್ತೂರು: ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್‌ಗೆ ಕಾರೊಂದು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಬೈಪಾಸ್ ರಸ್ತೆಯ ದರ್ಬೆ ಸಮೀಪ ಗುರುವಾರ ನಸುಕಿನ ಜಾವ ಸಂಭವಿಸಿದೆ.

ಮಡಿಕೇರಿ ನೋಂದಣಿಯ ಕಾರು ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ದರ್ಬೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಓರ್ವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಪ್ರಯಾಣಿಕನನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!