- Advertisement -


- Advertisement -
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ವಿದ್ಯುತ್ ಉಪಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರದಂದು ನಡೆದಿದೆ. ಇದರಿಂದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳಲ್ಲಿ ಆತಂಕ ಉಂಟಾಗಿದೆ.
ಘಟನೆ ವೇಳೆ ಜೋರಾದ ಶಬ್ದ ಕೇಳಿಬಂದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- Advertisement -


