- Advertisement -


- Advertisement -
ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದಾಗ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಅವರ ಅಕಾಲಿಕ ನಿಧನವು ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ (ಕಾರ್ಟೂನ್) ರಚನೆ ಹಾಗೂ ಚಪ್ಪಲಿ ಉದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಸ್ನೇಹಜೀವಿಯಾಗಿದ್ದ ಅವರು ಎಲ್ಲರಿಗೂ ಆತ್ಮೀಯರಾಗಿದ್ದರು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
- Advertisement -


