- Advertisement -


- Advertisement -
ಮೂಡುಬಿದಿರೆ: ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಮೂಡುಬಿದಿರೆ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ್ ಮೃತಪಟ್ಟಿದ್ದಾರೆ. ಈ ದುರ್ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ.
ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಬದಲಿ ಕೆಲಸಗಾರನಾಗಿ ಮತ್ತೊಂದು ಮನೆಗೆ ತೆರಳಿದ್ದ ಅವರು, ಅಲ್ಲಿನ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಸಂತೋಷ್ ಅವರು ವಿವಾಹಿತರಾಗಿದ್ದು, ಒಂದು ಪುಟ್ಟ ಮಗುವನ್ನು ಹೊಂದಿದ್ದಾರೆ. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
- Advertisement -


