
ಮಂಡ್ಯ ನಗರದ ಮಹಾವೀರ ವೃತ್ತದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಅಡ್ಡಲಾಗಿ ಬೈಕ್ ನಿಲ್ಲಿಸಿದ ಯುವಕನೊಬ್ಬ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಘಟನೆ ಕೆಲಕಾಲ ಆತಂಕಕ್ಕೆ ಕಾರಣವಾಗಿದೆ.
ಮಹಾವೀರ ವೃತ್ತದಲ್ಲಿ ಸಂಚಾರ ದಟ್ಟಣೆಯಿಂದಾಗಿ ಕೆಎಸ್ಆರ್ಟಿಸಿ ಬಸ್ ನಿಂತಿತ್ತು. ಈ ವೇಳೆ ಬೈಕ್ನಲ್ಲಿ ಬಂದ ಯುವಕನೊಬ್ಬ ಏಕಾಏಕಿ ಬಸ್ನ ಮುಂಭಾಗದಲ್ಲಿ ವಾಹನ ನಿಲ್ಲಿಸಿ, ಜೋರಾಗಿ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ.
ಯುವಕನ ಈ ಅನಿರೀಕ್ಷಿತ ವರ್ತನೆಯಿಂದ ಬಸ್ನಲ್ಲಿದ್ದ ಪ್ರಯಾಣಿಕರು ಹಾಗೂ ಸುತ್ತಮುತ್ತಲಿದ್ದ ಸಾರ್ವಜನಿಕರು ಕೆಲಕಾಲ ಗೊಂದಲಕ್ಕೊಳಗಾಗಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ನಡೆದ ಈ ಘಟನೆ ಸಾರ್ವಜನಿಕರ ಗಮನ ಸೆಳೆದಿದ್ದು, ಸಂಚಾರಕ್ಕೆ ಅಡ್ಡಿಪಡಿಸಿದ ಯುವಕನ ವರ್ತನೆಗೆ ಆಕ್ಷೇಪ ವ್ಯಕ್ತವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಯುವಕನನ್ನು ಪತ್ತೆಹಚ್ಚಿ, ಘಟನೆ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಪೊಲೀಸರನ್ನು ಒತ್ತಾಯಿಸಿದ್ದಾರೆ.
ನಿಜವಾದ ಉದ್ದೇಶ ಮತ್ತು ಘಟನೆಯ ಸಂಪೂರ್ಣ ವಿವರಗಳು ತಿಳಿದುಬರಬೇಕಿದೆ.


