Friday, November 20, 2026
Homeಪ್ರಮುಖ-ಸುದ್ದಿಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್!; ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ...

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್!; ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

- Advertisement -
- Advertisement -

ನವದೆಹಲಿ: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಸುಪ್ರೀಂ ಕೋರ್ಟ್ ಗ್ರೀನ್‌ ಸಿಗ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ. ಈ ಆದೇಶದಿಂದ ಓಲಾ, ಉಬರ್ ಮತ್ತು ರ‍್ಯಾಪಿಡೋದಂತಹ ಬೈಕ್ ಟ್ಯಾಕ್ಸಿ ಸೇವಾ ಸಂಸ್ಥೆಗಳು ಹಾಗೂ ಲಕ್ಷಾಂತರ ಪ್ರಯಾಣಿಕರಿಗೆ ದೊಡ್ಡ ನಿರಾಳತೆ ಸಿಕ್ಕಿದೆ. ಮತ್ತೊಂದೆಡೆ, ರಾಜ್ಯ ಸರ್ಕಾರ ಮತ್ತು ಆಟೋ-ಟ್ಯಾಕ್ಸಿ ಸಂಘಟನೆಗಳಿಗೆ ಹಿನ್ನಡೆಯಾಗಿದೆ.

ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರು ತಮ್ಮ ಕಚೇರಿಯಲ್ಲಿ ಕೆಲಸ ಮಾಡುವ ಹಾಗೂ ಬೈಕ್ ಟ್ಯಾಕ್ಸಿ ಬಳಸುವ ಯುವತಿಯರೊಂದಿಗೆ ನಡೆಸಿದ ಸಂಭಾಷಣೆಯನ್ನು ಸ್ಮರಿಸಿಕೊಂಡು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!