Saturday, November 21, 2026
Homeಪ್ರಮುಖ-ಸುದ್ದಿ36 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸವಣಾಲು...

36 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸವಣಾಲು ಶಾಖೆಯ ನೂತನ ಕಟ್ಟಡ ಉದ್ಘಾಟನೆ

- Advertisement -
- Advertisement -

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸವಣಾಲು ಶಾಖೆಯ ಕಟ್ಟಡವನ್ನು ರೈತರಿಗೆ ಅನುಕೂಲವಾಗುವ ಉದ್ದೇಶದಿಂದ 36 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದು, ಶಾಖೆಯನ್ನು ನ. 21ರಂದು ಉದ್ಘಾಟನೆ ಮಾಡಲಾಯಿತು.

ಶಾಸಕ ಹರೀಶ್ ಪೂಂಜ ಅವರು ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರೈತರಿಗೆ ತುರ್ತಾಗಿ ಸಾಲದ ಅಗತ್ಯವಿದ್ದಾಗ ಕೃಷಿ ಪತ್ತಿನ ಸಹಕಾರ ಸಂಘಗಳು ನೆರವಾಗುತ್ತವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.

ಶಾಖೆಯ ನಾಮಫಲಕವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಅನಾವರಣಗೊಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಮಾತನಾಡಿ, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 113 ವರ್ಷಗಳನ್ನು ಪೂರೈಸಿದೆ. ಆರಂಭದಲ್ಲಿ 9 ಗ್ರಾಮಗಳ ವ್ಯಾಪ್ತಿಯನ್ನು ಹೊಂದಿದ್ದ ಸಂಘವು 1980ರಲ್ಲಿ ನಡ ಶಾಖೆಯನ್ನು ಆರಂಭಿಸಿತು. ನಂತರ ಮದ್ದಡ್ಕ, ಸವಣಾಲು ಹಾಗೂ 2025ರಲ್ಲಿ ಮುಂಡೂರು ಶಾಖೆಗಳನ್ನು ಪ್ರಾರಂಭಿಸಲಾಯಿತು. ಪ್ರಸ್ತುತ ಸಂಘದಲ್ಲಿ 12,628 ಸದಸ್ಯರಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎಂ. ರಘು, ಪ್ರಗತಿಪರ ಕೃಷಿಕ ಎಂ. ಗಣೇಶ್ ಭಟ್, ಗೋಪಾಲಗೌಡ, ಸಂಘದ ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿರ್ದೇಶಕರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ನಿರ್ದೇಶಕಿ ಪ್ರೇಮಾ ಪ್ರಾರ್ಥಿಸಿದರು. ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಸ್ವಾಗತಿಸಿದರು. ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಗಣೇಶ್ ಭಂಡಾರಿ ವಂದಿಸಿದರು.

- Advertisement -

Latest News

error: Content is protected !!