- Advertisement -


- Advertisement -
ಉಡುಪಿ: ಸ್ನೇಹಿತರೊಂದಿಗೆ ಶಟಲ್ ಆಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದ 39 ವರ್ಷದ ಪ್ರಶಾಂತ್ ಭೋಜ ಕುಂದರ್ ಮೃತಪಟ್ಟಿದ್ದಾರೆ.
ಕೋಟೆಬೀಡು ಬಳಿಯ ನಿವಾಸಿ ಪ್ರಶಾಂತ್ ಅವರು ಸಂಜೆ ಸ್ನೇಹಿತರೊಂದಿಗೆ ಶಟಲ್ ಆಡುತ್ತಿದ್ದಾಗ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ನೇಹಿತರು ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಪ್ರಶಾಂತ್ ಅವರು ಎರಡು ತಿಂಗಳ ಹಿಂದೆ ಉದ್ಯೋಗ ಅರಸಿ ದುಬೈಗೆ ತೆರಳಿದ್ದರು. 10 ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದರು. ಕಳೆದ ನಾಲ್ಕು ವರ್ಷಗಳಿಂದ ಸಕ್ಕರೆ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ ನೀಡಿದ ದೂರಿನ ಮೇರೆಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


