Monday, November 23, 2026
Homeಕರಾವಳಿಉಡುಪಿನಕಲಿ ಖಾತೆಗಳಿಂದ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್; ಕಿಡಿಗೇಡಿಗಳಿಗೆ ಜೈಲೂಟದ ಎಚ್ಚರಿಕೆ ನೀಡಿದ ಹರೀಶ್...

ನಕಲಿ ಖಾತೆಗಳಿಂದ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್; ಕಿಡಿಗೇಡಿಗಳಿಗೆ ಜೈಲೂಟದ ಎಚ್ಚರಿಕೆ ನೀಡಿದ ಹರೀಶ್ ಪೂಂಜಾ

- Advertisement -
- Advertisement -

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುವವರಿಗೆ ಮುಂದಿನ ದಿನಗಳಲ್ಲಿ ಜೈಲು ಶಿಕ್ಷೆ ಅನುಭವಿಸುವ ಪರಿಸ್ಥಿತಿ ಬರಲಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಎಚ್ಚರಿಕೆ ನೀಡಿದರು.

ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಬೈಲೂರಿನಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ದೇಶದ ಗೌರವಕ್ಕೆ ಧಕ್ಕೆ ತರುತ್ತಿದೆ ಎಂದು ಟೀಕಿಸಿದ ಅವರು, ರಾಹುಲ್ ಗಾಂಧಿ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹಾಳು ಮಾಡುತ್ತಿದ್ದರೆ, ಮುನಿಯಾಲು ಉದಯಕುಮಾರ್ ಶೆಟ್ಟಿ ಕಾರ್ಕಳದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಸಚಿವ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಅವರ ಕನಸಿನ ಯೋಜನೆಯಾದ ಪರಶುರಾಮ ಥೀಮ್ ಪಾರ್ಕ್ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಅಡ್ಡಿಪಡಿಸುತ್ತಿದೆ. ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ ಬಿಡುಗಡೆ ಮಾಡದೆ ರಾಜಕೀಯ ದ್ವೇಷದಿಂದ ಯೋಜನೆಯನ್ನು ವಿಳಂಬ ಮಾಡಲಾಗುತ್ತಿದೆ ಎಂದು ದೂರಿದರು.

ಇದೇ ವೇಳೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಪ್ರಶ್ನಿಸಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ನಿರೀಕ್ಷಿತ ಹಣ ಜಮೆಯಾಗುತ್ತಿಲ್ಲ ಎಂದು ಆರೋಪಿಸಿದರು. ಮರಳು ಮತ್ತು ಕೆಂಪು ಕಲ್ಲಿನ ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಮನೆ ನಿರ್ಮಿಸುವುದು ಕಷ್ಟವಾಗಿದೆ. ಈ ಸಮಸ್ಯೆಗಳ ಕುರಿತು ಉದಯಕುಮಾರ್ ಶೆಟ್ಟಿ ಅವರು ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕು ಎಂದು ಸವಾಲು ಹಾಕಿದರು.

- Advertisement -

Latest News

error: Content is protected !!