- Advertisement -


- Advertisement -
ಕಾಪು ಬೀಚ್ನಲ್ಲಿ ಭಾನುವಾರ ಸಂಜೆ ಸಮುದ್ರದಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ.
ಮೃತರನ್ನು ಶಿವಮೊಗ್ಗ ಮೂಲದ ಕುಂದಾಪುರ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಸಮೀರ್ ಹಾಗೂ ದಾವಣಗೆರೆ ಜಿಲ್ಲೆಯ ಮಲ್ಲಿಕ್ ರಿಹಾನ್ ಎಂದು ಗುರುತಿಸಲಾಗಿದೆ. ಕರಾವಳಿ ಕಾವಲು ಪಡೆಯ ಪೊಲೀಸರು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಮೃತದೇಹಗಳನ್ನು ಸಮುದ್ರದಿಂದ ದಡಕ್ಕೆ ತಂದಿದ್ದಾರೆ.
ಕಾಪು ಪೊಲೀಸರು ಹಾಗೂ ಮೃತರ ಪೋಷಕರು ಸ್ಥಳದಲ್ಲಿದ್ದು, ಗುರುತು ದೃಢಪಡಿಸುವ ಪ್ರಕ್ರಿಯೆ ನಡೆಸಿದ್ದಾರೆ. ಈಶ್ವರ್ ಮಲ್ಪೆ ಮತ್ತು ಅವರ ತಂಡ, ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
- Advertisement -


