- Advertisement -


- Advertisement -
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್ನ ಮಾಜಿ ವಾಚ್ಮ್ಯಾನ್ ನರೇಂದ್ರ ಸಿಂಗ್ ಪ್ರತಿಕೂಲ ಸಾಕ್ಷಿ ನುಡಿದಿದ್ದಾರೆ. 10ನೇ ಆರೋಪಿ ವಿನಯ್ ಹೊರತುಪಡಿಸಿ ದರ್ಶನ್, ಪವಿತ್ರಾಗೌಡ ಸೇರಿದಂತೆ ಬೇರೆ ಯಾವುದೇ ಆರೋಪಿಗಳನ್ನು ತಾನು ನೋಡಿಲ್ಲ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.
ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಸೋಮವಾರ ವಿಚಾರಣೆಗೆ ಹಾಜರಾದ ನರೇಂದ್ರ ಸಿಂಗ್ ಹಿಂದಿ ಭಾಷೆಯಲ್ಲಿ ಹೇಳಿಕೆ ನೀಡಿದ್ದಾರೆ. ದರ್ಶನ್ ಸೇರಿದಂತೆ ಜೈಲಿನಲ್ಲಿರುವ ಆರೋಪಿಗಳನ್ನು ಗುರುತಿಸುವುದಿಲ್ಲ ಎಂದು ತಿಳಿಸಿದ್ದಾರೆ. ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಹಿಂದಿಯಲ್ಲೇ ಪ್ರಶ್ನೆಗಳನ್ನು ಕೇಳಿದ್ದಾರೆ. ಹಿಂದಿ ಹೊರತುಪಡಿಸಿ ಬೇರೆ ಭಾಷೆ ಬರುವುದಿಲ್ಲ, ಕನ್ನಡವೂ ಅರ್ಥವಾಗುವುದಿಲ್ಲ ಎಂದು ನರೇಂದ್ರ ಸಿಂಗ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಭಾಷಾಂತರಕಾರರನ್ನು ಕರೆಸುವಂತೆ ಎಸ್ಪಿಪಿ ಮನವಿ ಮಾಡಿದ್ದಾರೆ.
- Advertisement -


