- Advertisement -


- Advertisement -
ಮಂಗಳೂರು: ಪೊಲೀಸ್ ಸಿಬ್ಬಂದಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಜೊತೆ ಮೊಬೈಲ್ನಲ್ಲಿ ಮಾತನಾಡಿದ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಎಎಸ್ಐ ಅರುಣ್ ಆಳ್ವ ಅವರನ್ನು ಅಮಾನತುಗೊಳಿಸಲಾಗಿದೆ. ಪೊಲೀಸ್ ಕಮಿಷನರ್ ಈ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ಆಗಸ್ಟ್ 25ರಂದು ರಾತ್ರಿ ನೆಹರು ಮೈದಾನದಲ್ಲಿ ವಾಕಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ಇಲೆಕ್ಟ್ರಿಶಿಯನ್ ರವಿರಾಜ್ ಅವರನ್ನು ಪೊಲೀಸ್ ಸಿಬ್ಬಂದಿ ತಡೆದು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ಎಎಸ್ಐ ಅರುಣ್ ಆಳ್ವ ಅವರೊಂದಿಗೆ ನಡೆಸಿದ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
- Advertisement -


