- Advertisement -


- Advertisement -
ಕುಂದಾಪುರ: ಕೋಟೇಶ್ವರ-ಹಾಲಾಡಿ ರಸ್ತೆಯ ಕಲ್ಕೆರೆಯಲ್ಲಿ ಸೋಮವಾರ ಸಂಜೆ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ 35 ವರ್ಷದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ತೀರ್ಥಹಳ್ಳಿ ಮೂಲದ ಹರ್ಷ ಎಂದು ಗುರುತಿಸಲಾಗಿದೆ. ಅವರು ಕಮಲಶಿಲೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ, ಬಳಿಕ ಕೋಟೇಶ್ವರದಿಂದ ಬೈಕ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಹರ್ಷ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ವಿಷಯ ತಿಳಿದು ಕುಂದಾಪುರ ಪಟ್ಟಣ ಠಾಣೆಯ ಇನ್ಸ್‌ಪೆಕ್ಟರ್ ಜಯರಾಮ್ ಡಿ. ಗೌಡ, ಸಂಚಾರ ಪೊಲೀಸ್ ಸಿಬ್ಬಂದಿ ಅನೂಪ್ ನಾಯಕ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -


