Wednesday, November 25, 2026
Homeಅಪರಾಧಅಬಕಾರಿ ಇಲಾಖೆ ದಾಳಿ; ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, ಎರಡು ಕಾರು ವಶಕ್ಕೆ

ಅಬಕಾರಿ ಇಲಾಖೆ ದಾಳಿ; ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, ಎರಡು ಕಾರು ವಶಕ್ಕೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಾಗೂ ಕೇರಳಕ್ಕೆ ಸಾಗಿಸುತ್ತಿದ್ದ ಒಟ್ಟು 1,450.340 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಮದ್ಯ ಸಾಗಾಟಕ್ಕೆ ಬಳಸಿದ್ದ ಎರಡು ಕಾರುಗಳನ್ನೂ ಜಪ್ತಿ ಮಾಡಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹20.37 ಲಕ್ಷ ಎಂದು ಅಂದಾಜಿಸಲಾಗಿದೆ.

ಮೊದಲ ಪ್ರಕರಣ: ಅಕ್ರಮ ಮದ್ಯ ದಾಸ್ತಾನು ಪತ್ತೆ

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯ ಅಮಿತ್ ಎಂಬುವವರ ಜಾಗದಲ್ಲಿ ಸಂಪ್ರಿತ್ ಕಾಸರಗೋಡು ಎಂಬಾತ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 146 ಬಾಕ್ಸ್‌ಗಳಲ್ಲಿನ 1,261.440 ಲೀಟರ್ ವಿಸ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು ₹7.72 ಲಕ್ಷ ಎಂದು ಅಂದಾಜಿಸಲಾಗಿದೆ.

ಎರಡನೇ ಪ್ರಕರಣ: ಕೇರಳಕ್ಕೆ ಮದ್ಯ ಸಾಗಾಟ

ಮೆಲ್ಕಾರ್ ಸಮೀಪದ ಕಲ್ಲಡ್ಕ ಬಳಿ ಕೇರಳ ನೋಂದಣಿಯ ಎರಡು ಕಾರುಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 188.9 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಗುರುತಿಸಲಾಗಿದ್ದು, ಮದ್ಯ ಹಾಗೂ ಎರಡು ಕಾರುಗಳ ಒಟ್ಟು ಮೌಲ್ಯ ₹12.65 ಲಕ್ಷ ಎಂದು ತಿಳಿದುಬಂದಿದೆ.

ಹೆಜಮಾಡಿ ಟೋಲ್ ಪ್ರಕರಣದ ಬೆನ್ನಲ್ಲೇ ಮಂಗಳೂರು ವಿಭಾಗದ ಜಂಟಿ ಆಯುಕ್ತ ಸಿ. ಜಗದೀಶ್ ಹಾಗೂ ಉಪ ಆಯುಕ್ತ ಬಿಂದುಶ್ರೀ ಪಿ. ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಮತ್ತು ಮಂಗಳೂರು ಉಪ ವಿಭಾಗದ ಅಬಕಾರಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.

- Advertisement -

Latest News

error: Content is protected !!