- Advertisement -


- Advertisement -
ಉಡುಪಿ: ತಾಲೂಕಿನ ಶಿರೂರಿನ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಪ್ಪುಂದ ಜನತಾ ಕಾಲೊನಿಯ ಅಭಿಷೇಕ ಖಾರ್ವಿ (23) ಹಾಗೂ ಪ್ರವೀಣ ಖಾರ್ವಿ (23) ಮೃತ ದುರ್ದೈವಿಗಳು.
ಉಪ್ಪುಂದದ ಕೊಡಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಇವರು, ಸೋಮವಾರ ರಾತ್ರಿ ಉಪ್ಪುಂದದಿಂದ ಶಿರೂರು ಟೋಲ್ಗೇಟ್ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರ ತಲೆಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ಪ್ರವೀಣ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರೆ, ಅಭಿಷೇಕ ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದರು. ಬಡ ಕುಟುಂಬದ ಯುವಕರ ಅಕಾಲಿಕ ನಿಧನಕ್ಕೆ ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


