- Advertisement -


- Advertisement -
ಬಂಟ್ವಾಳ: ತಾಲೂಕಿನ ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂಬ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಬಿ.ಸಿ.ರೋಡ್ನ ಬ್ಯಾಂಕ್ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಇವರು ನ.20ರಿಂದ ಕಾಣೆಯಾಗಿದ್ದಾರೆ.
ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಮನನೊಂದ ಕವಿತಾ, ಅಜ್ಜಿಯ ಮನೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದರು. ಆದರೆ ಅಲ್ಲಿಗೂ ತಲುಪದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ತಕ್ಷಣ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ಕೋರಿದ್ದಾರೆ
- Advertisement -


