- Advertisement -


- Advertisement -
ಮೂಡುಬಿದಿರೆ: ವಿದ್ಯಾಗಿರಿ–ಮೂಡುಬಿದಿರೆ ರಸ್ತೆಯ ಗಾಂಧಿನಗರದಲ್ಲಿ ಮಂಗಳವಾರ ಬೆಳಿಗ್ಗೆ ಗೂಡ್ಸ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃತಪಟ್ಟಿದ್ದಾರೆ. ಕೊಪ್ಪದ ಕುಮೇರು ಸಮೀಪದ ಮರಕಡ ನಿವಾಸಿ ಚಂದು ಕುಮಾರ್ (24) ಮೃತ ದುರ್ದೈವಿ.
ಕಟ್ಟಡ ಕಾಮಗಾರಿಯಲ್ಲಿ ಸಹಾಯಕರಾಗಿ ದುಡಿಯುತ್ತಿದ್ದ ಚಂದು ಕುಮಾರ್, ಎಂದಿನಂತೆ ಮೇಸ್ತ್ರಿ ಯಾದವ್ ಅವರ ಬೈಕ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಗೂಡ್ಸ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಚಂದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಯಾದವ್ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


