- Advertisement -


- Advertisement -
ವಿಟ್ಲ: ಕನ್ಯಾನ ಸಮೀಪದ ಶಿರಂಕಲ್ಲು ಎಂಬಲ್ಲಿ ಯುವತಿಯೊಬ್ಬಳು ತನ್ನ ಚಿಕ್ಕಪ್ಪನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.
ಶಿರಂಕಲ್ಲು ನಿವಾಸಿ ಚೆನ್ನಯ್ಯ ಪೂಜಾರಿ (50) ಮೃತಪಟ್ಟವರು. ಘಟನೆಯ ಮಾಹಿತಿ ತಿಳಿದ ತಕ್ಷಣ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Advertisement -


