Thursday, November 26, 2026
Homeಕರಾವಳಿಉಡುಪಿಮಲ್ಪೆಯಲ್ಲಿ ಪತ್ತೆಯಾದ 10ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಗಡಿಪಾರು; ಶಿಕ್ಷೆಯ ಅವಧಿ ಪೂರ್ಣಗೊಂಡ ಹಿನ್ನೆಲೆ

ಮಲ್ಪೆಯಲ್ಲಿ ಪತ್ತೆಯಾದ 10ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಗಡಿಪಾರು; ಶಿಕ್ಷೆಯ ಅವಧಿ ಪೂರ್ಣಗೊಂಡ ಹಿನ್ನೆಲೆ

- Advertisement -
- Advertisement -

ಉಡುಪಿ: ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಗಡಿಪಾರು ಮಾಡುವ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

2024ರ ಅಕ್ಟೋಬರ್ 11ರಂದು ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಕಂಡುಬಂದಿದ್ದ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು, ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2025ರ ಡಿಸೆಂಬರ್ 8ರಂದು ಆರೋಪಿಗಳಿಗೆ ತಲಾ ಎರಡು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿತ್ತು. ಶಿಕ್ಷೆಯ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇದೀಗ ಅವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ.

ಭಾರತದ ಗೃಹ ಸಚಿವಾಲಯ ಹಾಗೂ ಬೆಂಗಳೂರಿನ ಪ್ರಾದೇಶಿಕ ವಿದೇಶಿಯರ ನೋಂದಣಾಧಿಕಾರಿಗಳ ಆದೇಶದಂತೆ, 10 ಮಂದಿಯನ್ನು ನವೆಂಬರ್ 23ರಂದು ಪೊಲೀಸ್ ಭದ್ರತೆಯಲ್ಲಿ ಉಡುಪಿಯಿಂದ ಬೆಂಗಳೂರಿಗೆ ಕರೆದೊಯ್ದು, ಅಲ್ಲಿಂದ ರೈಲಿನ ಮೂಲಕ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಿಎಸ್‌ಎಫ್ ಅಧಿಕಾರಿಗಳ ಮುಂದೆ ಹಾಜರುಪಡಿಸಲು ಕಳುಹಿಸಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹಾಗೂ ಜಿಲ್ಲಾ ವಿದೇಶಿಯರ ನೋಂದಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಜಿಲ್ಲಾ ವಿಶೇಷ ಪೊಲೀಸ್ ವಿಭಾಗ ಮತ್ತು ವಿದೇಶಿಯರ ವಿಭಾಗದ ಅಧಿಕಾರಿಗಳು ಸಹಕರಿಸಿದ್ದಾರೆ.

- Advertisement -

Latest News

error: Content is protected !!