Friday, November 27, 2026
Homeಅಪರಾಧಸಿಎಂ ನಿವಾಸ, ವಿಧಾನಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಪ್ರಕರಣ; ಆರೋಪಿಯ ಬಂಧನ

ಸಿಎಂ ನಿವಾಸ, ವಿಧಾನಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಪ್ರಕರಣ; ಆರೋಪಿಯ ಬಂಧನ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಕಾರ್ತಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 7ರಂದು ಕಾರ್ತಿಕ್ ‘ನಮ್ಮ ಯಾತ್ರಿ’ ಆ್ಯಪ್ ಮೂಲಕ ಸದಾಶಿವನಗರದಿಂದ ಆರ್.ಆರ್. ನಗರಕ್ಕೆ ಹೋಗಲು ಆಟೋ ಬುಕ್ ಮಾಡಿದ್ದ. ಆಟೋ ಚಾಲಕ ಆತ ನೀಡಿದ್ದ ಪಿಕಪ್ ಸ್ಥಳಕ್ಕೆ ಬಂದಾಗ, ಕಾರ್ತಿಕ್ ಕರೆ ಮಾಡಿ ತಾನು ಸಿಎಂ ನಿವಾಸದಲ್ಲಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಅಲ್ಲಿದ್ದ ಪೊಲೀಸರಿಗೆ ಫೋನ್ ನೀಡುವಂತೆ ಚಾಲಕನಿಗೆ ಹೇಳಿದ್ದಾನೆ. ಚಾಲಕ ಪೊಲೀಸರಿಗೆ ಫೋನ್ ನೀಡಿದಾಗ, ಸಿಎಂ ನಿವಾಸ ಮತ್ತು ವಿಧಾನಸೌಧದಲ್ಲಿ ಬಾಂಬ್ ಇಟ್ಟಿರುವುದಾಗಿ ಕಾರ್ತಿಕ್ ಬೆದರಿಕೆ ಹಾಕಿದ್ದಾನೆ. ಮುಖ್ಯಮಂತ್ರಿಗಳ ಬೆಂಗಾವಲು ಪಡೆ ತೆರಳುವಾಗ ಸ್ಫೋಟ ಸಂಭವಿಸಲಿದೆ ಎಂದೂ ಹೇಳಿದ್ದಾನೆ.

ಕೂಡಲೇ ಪೊಲೀಸರು ಸಿಎಂ ನಿವಾಸ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬೆದರಿಕೆ ಕರೆ ಎಂಬುದು ತಿಳಿದುಬಂದಿದೆ.

ಈ ಸಂಬಂಧ ಆಟೋ ಚಾಲಕ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಕಾರ್ತಿಕ್‌ನನ್ನು ಬಂಧಿಸಿದ್ದಾರೆ. ಈತ ಈ ಹಿಂದೆಯೂ ಹಲವು ಬಾರಿ ಹುಸಿ ಬೆದರಿಕೆ ಕರೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!