Friday, November 27, 2026
Homeಅಪರಾಧಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ; ಐವರು ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂ...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ; ಐವರು ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್‌ನಿಂದ ವಜಾ

- Advertisement -
- Advertisement -

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ನೀಡಲಾಗಿದ್ದ ಜಾಮೀನು ರದ್ದುಪಡಿಸುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಎ-3 ಪವನ್, ಎ-5 ನಂದೀಶ್, ಎ-9 ಧನರಾಜ್, ಎ-10 ವಿನಯ್ ಹಾಗೂ ರಾಘವೇಂದ್ರ ಅವರ ಜಾಮೀನು ರದ್ದುಪಡಿಸುವಂತೆ ಪ್ರಾಸಿಕ್ಯೂಷನ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ವಿನೋದ್ ಚಂದ್ರನ್ ಅವರ ಪೀಠ, ಜಾಮೀನು ಮಂಜೂರಾಗಿ ಒಂದೂವರೆ ವರ್ಷದ ಬಳಿಕ ಅರ್ಜಿ ಸಲ್ಲಿಸಿರುವುದನ್ನು ಗಮನಿಸಿ ಅದನ್ನು ವಜಾಗೊಳಿಸಿದೆ.

ಈ ಹಿಂದೆ ಐವರ ಜಾಮೀನು ರದ್ದುಪಡಿಸುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಕೂಡ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಕೂಡ ಅರ್ಜಿಯನ್ನು ತಿರಸ್ಕರಿಸಿದೆ.

- Advertisement -

Latest News

error: Content is protected !!