Friday, November 27, 2026
Homeಆರಾಧನಾಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಗ್‌ಬಾಸ್ ಖ್ಯಾತಿಯ ನಟಿ ಅನುಷಾ ರೈ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಗ್‌ಬಾಸ್ ಖ್ಯಾತಿಯ ನಟಿ ಅನುಷಾ ರೈ

- Advertisement -
- Advertisement -

ಉಡುಪಿ: ಬಿಗ್‌ಬಾಸ್ ಖ್ಯಾತಿಯ ನಟಿ ಅನುಷಾ ರೈ ಅವರು ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ವತಿಯಿಂದ ನಟಿ ಅನುಷಾ ರೈ ಅವರನ್ನು ಗೌರವಿಸಲಾಯಿತು.

ಬಳಿಕ ದೇವಿಯ ಅನುಗ್ರಹ ಪ್ರಸಾದ ಸ್ವೀಕರಿಸಿದ ಅವರು, ದೇವಸ್ಥಾನದ ವತಿಯಿಂದ ಆಯೋಜಿಸಿರುವ ‘ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ’ ಎಂಬ ವಿಶಿಷ್ಟ ಧಾರ್ಮಿಕ ಅಭಿಯಾನದಲ್ಲಿ ಭಾಗವಹಿಸಿದರು. ಅಭಿಯಾನದ ಅಂಗವಾಗಿ ಭಕ್ತಿಯಿಂದ ನವದುರ್ಗಾ ಲೇಖನ ಬರೆದು ಕಾಪು ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದರು.

- Advertisement -

Latest News

error: Content is protected !!