Saturday, November 28, 2026
Homeಕರಾವಳಿಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಸ್ಕೂಟರ್ ಸವಾರ ಸಾವು

ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಸ್ಕೂಟರ್ ಸವಾರ ಸಾವು

- Advertisement -
- Advertisement -

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ 31 ವರ್ಷದ ಯುವಕ ಮೃತಪಟ್ಟ ಘಟನೆ ನ.27ರಂದು ಬಿಳಿನೆಲೆ ಗ್ರಾಮದ ಕೋಟೆ ಹೊಳೆ ಸೇತುವೆ ಬಳಿ ನಡೆದಿದೆ.

ಮೃತರನ್ನು ಸೋಮವಾರಪೇಟೆ ಸಮೀಪದ ಕಲ್ಕಂದೂರು ನಿವಾಸಿ ಕೃಷ್ಣಪ್ಪ ಅವರ ಪುತ್ರ ವಿಶ್ವಾಸ್ (31) ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದರು.

ನ.27ರಂದು ಬೆಳಗ್ಗೆ ವಿಶ್ವಾಸ್ ಅವರು ಸ್ಕೂಟರ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರನ್ನು ನಂದನ್ ಎಂಬವರು ಚಲಾಯಿಸುತ್ತಿದ್ದು, ಅಜಾಗರೂಕ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಢಿಕ್ಕಿಯ ರಭಸಕ್ಕೆ ವಿಶ್ವಾಸ್ ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಅವರನ್ನು ಕಡಬದ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!