Saturday, November 28, 2026
Homeಕರಾವಳಿಉಡುಪಿ2002ರ ಮನೋಹರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಯುಎಇಯಿಂದ ಭಾರತಕ್ಕೆ ಗಡಿಪಾರು

2002ರ ಮನೋಹರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಯುಎಇಯಿಂದ ಭಾರತಕ್ಕೆ ಗಡಿಪಾರು

- Advertisement -
- Advertisement -

ಉಡುಪಿ: 2002ರಲ್ಲಿ ಉಡುಪಿಯಲ್ಲಿ ನಡೆದ ಮನೋಹರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ರಾಜೇಶ್ ಕೇಶವ ಆಚಾರ್ಯನನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ (ಯುಎಇ) ಭಾರತಕ್ಕೆ ಗಡಿಪಾರು ಮಾಡಲಾಗಿದೆ. ಈತ ಕಲಿ ಯೋಗೀಶನ ಸಹಚರ ಎನ್ನಲಾಗಿದೆ.

ನವೆಂಬರ್ 27ರಂದು ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದ್ದು, ಕರ್ನಾಟಕ ಪೊಲೀಸರು ಆತನನ್ನು ವಶಕ್ಕೆ ಪಡದುಕೊಳ್ಳಲಿದ್ದಾರೆ ಎನ್ನಲಾಗಿದೆ. ಮನೋಹರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಚೋದನೆ ಹಾಗೂ ಸಹಕಾರ ನೀಡಿದ ಆರೋಪ ರಾಜೇಶ್ ಆಚಾರ್ಯನ ಮೇಲಿದೆ. ಪ್ರಕರಣ ದಾಖಲಾದ ಬಳಿಕ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ.

ಆರೋಪಿಯ ಪತ್ತೆಗಾಗಿ 2026ರ ಮೇ ತಿಂಗಳಲ್ಲಿ ಇಂಟರ್‌ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು. ಅಲ್ಲದೆ, ಸುಮಾರು ಮೂರು ತಿಂಗಳ ಹಿಂದೆ ಆತನ ಪಾಸ್‌ಪೋರ್ಟ್ ಕೂಡ ರದ್ದುಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಯುಎಇ ಅಧಿಕಾರಿಗಳು ಆತನನ್ನು ಪತ್ತೆಹಚ್ಚಿ ಬಂಧಿಸಿ, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಭಾರತಕ್ಕೆ ಗಡಿಪಾರು ಮಾಡಿದ್ದಾರೆ.

ಸಿಬಿಐ, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಹಾಗೂ ಕರ್ನಾಟಕ ಪೊಲೀಸರ ಸಮನ್ವಯದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಮುಂಬೈಗೆ ಆಗಮಿಸಿರುವ ಆರೋಪಿಯನ್ನು ಕರ್ನಾಟಕಕ್ಕೆ ಕರೆತಂದು ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

- Advertisement -

Latest News

error: Content is protected !!