- Advertisement -


- Advertisement -
ಉಡುಪಿ: ಬ್ರಹ್ಮಾವರ ತಾಲೂಕಿನ ಗುಂಡ್ಮಿ ಅಂಬಾಗಿಲು ಸಮೀಪದ ಸಾಸ್ತಾನ ಟೋಲ್ ಪ್ಲಾಝಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ರಿಕ್ಷಾಕ್ಕೆ ಢಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಹಾರಿದೆ. ಢಿಕ್ಕಿಯ ರಭಸಕ್ಕೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ವಾಹನ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
- Advertisement -


