- Advertisement -


- Advertisement -
ಉಡುಪಿ: ಕೇಂದ್ರ ಭಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು.
ಈ ವೇಳೆ ಶಿರೂರು ಮಠದ ದಿವಾನ ಉದಯಕುಮಾರ್ ಸರಳತ್ತಾಯ, ಪರ್ಯಾಯ ಮಠದ ಪಾರುಪತ್ಯೆದಾರ ಸುದರ್ಶನ್ ಭಟ್ ಕಲ್ಯ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
- Advertisement -


