Thursday, June 4, 2026
Homeಕರಾವಳಿಸುಳ್ಯ KSRTC ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಪಾದಾಚಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಸುಳ್ಯ KSRTC ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಪಾದಾಚಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

- Advertisement -
- Advertisement -

ಸುಳ್ಯ: ಸುಳ್ಯ ಮಡಿಕೇರಿ ರಸ್ತೆಯಲ್ಲಿರುವ ಸಂಪಾಜೆ ಸಮೀಪದ ದೇವರಕೊಲ್ಲಿ ಎಂಬಲ್ಲಿ ನಿನ್ನೆ ಸಂಭವಿಸಿದ ಸರಕಾರಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ಪಾದಾಚಾರಿಯೋರ್ವರು ಇಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದೇವರ ಕೊಲ್ಲಿಯ ವಿಜಯ ಎಂಬವರು ಬಸ್ ಅಪಘಾತ ಸಂಭವಿಸುವಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಬಸ್ ಅವರ ಮೇಲೆರಗಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿತ್ತು.

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ರವರನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ವಿಜಯ್ ರವರು ಮೃತಪಟ್ಟಿದ್ದಾರೆ. ಹಾಗೆಯೇ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!