Thursday, June 4, 2026
Homeಕರಾವಳಿಚಾರ್ಮಾಡಿ ಘಾಟ್: ನಿಂತಿದ್ದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಚಾರ್ಮಾಡಿ ಘಾಟ್: ನಿಂತಿದ್ದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -

ಚಾರ್ಮಾಡಿ ಘಾಟ್ ನಲ್ಲಿ ಕಾರಿನಲ್ಲೇ ಮೃತದೇಹ ಪತ್ತೆ: ಡ್ರೈವರ್ ಸೀಟ್ ನಲ್ಲೇ ಕುಳಿತು ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ#Charmady

Posted by Maha Xpress on Wednesday, 19 August 2020
- Advertisement -

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ನಲ್ಲಿ ವಿಷ ಸೇವಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮಲೆಯಮಾರುತ ಬಳಿ ಕಾರಿನಲ್ಲೇ ವ್ಯಕ್ತಿಯ ಶವ ಪತ್ತೆಯಾಗಿದೆ‌.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಯಮಾರುತದ ಬಳಿ ಈ ಘಟನೆ ಬೆಳಕಿಗೆ ಬಂದಿದ್ದು, ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ನಲ್ಲೇ ಕಾರು ಇರುವುದಾಗಿ ತಿಳಿದು ಬಂದಿದೆ.

KA 05 MT 4877 ಕ್ವಿಡ್ ಕಾರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಕಾರಿನ ಪಕ್ಕದ ರಸ್ತೆಯಲ್ಲಿ ವಿಷದ ಬಾಟಲಿ ಕೂಡ ಪತ್ತೆಯಾಗಿದೆ. ಡ್ರೈವಿಂಗ್ ಸೀಟಿನಲ್ಲಿಯೇ ಕುಳಿತು ವಿಷ ಸೇವಿಸಿರುವ ವ್ಯಕ್ತಿ ಯಾರೆಂಬ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ..

ಸ್ಥಳಕ್ಕೆ ಬಣಕಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!