Monday, June 8, 2026
Homeಕರಾವಳಿಮಂಗಳೂರು: ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಪ್ರಕರಣ- ಆರೋಪಿ ನ್ಯಾಯಾಲಯಕ್ಕೆ ಹಾಜರು

ಮಂಗಳೂರು: ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಪ್ರಕರಣ- ಆರೋಪಿ ನ್ಯಾಯಾಲಯಕ್ಕೆ ಹಾಜರು

- Advertisement -
- Advertisement -

ಮಂಗಳೂರು: ನಗರದ ಹೊರವಲಯದಲ್ಲಿರುವ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲೆಯ ಕಾರ್ಕಳ ಮುದ್ರಾಡಿಯ ನಿವಾಸಿ ವಸಂತ ಕೃಷ್ಣ ಶೇರಿಗಾರ್(33) ಎಂಬಾತನನ್ನು ಬಂಧಿಸಿ, ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿ ವಿರುದ್ಧ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 505 ಬಿ (ಸಾರ್ವಜನಿಕರಲ್ಲಿ ಭೀತಿ ಮೂಡಿಸುವಿಕೆ), 507 (ಅನಾಮಧೇಯ ಸಂವಹನದಿಂದ ಬೆದರಿಕೆ), ಯುಎಪಿಎ (ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವ ಕಾಯ್ದೆ) 3(1)ಡಿ (ನಾಗರಿಕ ವಿಮಾನಯಾನಕ್ಕೆ ಬೆದರಿಕೆ)ಯಂತೆ ಪ್ರಕರಣ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!