- Advertisement -
- Advertisement -
ರಾಯಘಡ: ಮಹಾರಾಷ್ಟ್ರದ ರಾಯಘಡದಲ್ಲಿ ಬಹುಮಹಡಿ ಕಟ್ಟಡ ಕುಸಿದು 50 ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮಹದ್ ಕಜಲಪುರ್ ಪ್ರದೇಶದಲ್ಲಿರುವ ಈ ಬಹುಮಹಡಿ ಕಟ್ಟದಲ್ಲಿ 45 ಫ್ಲಾಟ್ ಗಳು ಇದ್ದು, ಸುಮಾರು 100 ಜನ ವಾಸವಾಗಿದ್ದರು. ಇಂದು ಸಂಜೆ 7 ಗಂಟೆಯ ಸುಮಾರಿಗೆ ಕಟ್ಟಡ ಕುಸಿದು ಬಿದ್ದಿದೆ ಎಂದು ರಾಯಗಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಎನ್ ಡಿ ಆರ್ ಆಫ್ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -