Wednesday, June 3, 2026
Homeತಾಜಾ ಸುದ್ದಿಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿ?

ಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿ?

- Advertisement -
- Advertisement -

ಬೆಂಗಳೂರು: ಬಹುನಿರೀಕ್ಷಿತ ರಾಜ್ಯದ ಗ್ರಾಮ ಪಂಚಾಯತ್ ಚುನಾವಣೆ ಈ ವರ್ಷದ ಅಂತ್ಯಕ್ಕೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದಲ್ಲಿ 6025 ಗ್ರಾಮ ಪಂಚಾಯಿತಿಗಳಿದ್ದು ಜೂನ್-ಜುಲೈ ತಿಂಗಳಿನಲ್ಲಿ ಅವಧಿ ಅಂತ್ಯವಾಗಿದೆ. ಕೊರೋನಾ ಕಾರಣದಿಂದ ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ರಾಜ್ಯದ 21 ಜಿಲ್ಲೆಗಳಲ್ಲಿ ಚುನಾವಣೆಗೆ ಮೀಸಲಾತಿ ಪಟ್ಟಿ ಸಿದ್ದವಾಗಿದ್ದು ಉಳಿದ ಜಿಲ್ಲೆಗಳ ಮೀಸಲಾತಿ ಪಟ್ಟಿಗೆ ಸಮಯ ನಿಗದಿಯಾಗಿದೆ.

ಈ ವರ್ಷದ ಅಂತ್ಯಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಕೇಂದ್ರ ಚುನಾವಣೆ ಆಯೋಗ ಹೊರಡಿಸಿರುವ ಹೊಸ ಮಾರ್ಗಸೂಚಿಯಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಆಯೋಗ ಚುನಾವಣೆಯನ್ನು ನಡೆಸಲಿದೆ.

- Advertisement -

Latest News

error: Content is protected !!