Wednesday, June 3, 2026
Homeತಾಜಾ ಸುದ್ದಿವಿವಾಹ ವಾರ್ಷಿಕೋತ್ಸವ ದಿನದಂದೇ ಕೊರೋನಾಗೆ ಬಲಿಯಾದ ಪೊಲೀಸ್ ಪೇದೆ

ವಿವಾಹ ವಾರ್ಷಿಕೋತ್ಸವ ದಿನದಂದೇ ಕೊರೋನಾಗೆ ಬಲಿಯಾದ ಪೊಲೀಸ್ ಪೇದೆ

- Advertisement -
- Advertisement -

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಪೊಲೀಸ್ ಪೇದೆ ಮಹದೇವ ಸ್ವಾಮಿ (38) ತಮ್ಮ ವಿವಾಹ ವಾರ್ಷಿಕೋತ್ಸವ ದಿನದಂದೇ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದಾರೆ.
.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊರೊನಾ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಕಳೆದ ಆಗಸ್ಟ್​ 12 ರಂದು Rapid ಆಯಂಟಿಜೆನ್ ಟೆಸ್ಟ್​ನಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢವಾಗಿತ್ತು.

ಈ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ತೆರಳದೆ ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿದ್ದರು. ಬುಧವಾರ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ಪ್ರಜ್ಞೆ ಕಳೆದುಕೊಂಡಿದ್ದ ಇವರನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಪೊಲೀಸ್ ಪೇದೆ ಮಹದೇವ ಸ್ವಾಮಿ ಅವರು ಬುಧವಾರ ತಮ್ಮ ನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿತ್ತು, ಅವರ ಸಾವಿನಿಂದ ಕುಟುಂಬವು ಶೋಕ ಸಾಗರದಲ್ಲಿ ಮುಳುಗಿದೆ.

- Advertisement -

Latest News

error: Content is protected !!