Saturday, June 6, 2026
Homeಕರಾವಳಿಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಯತೀಶ್ ಶೆಟ್ಟಿ ಆಯ್ಕೆ

ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಯತೀಶ್ ಶೆಟ್ಟಿ ಆಯ್ಕೆ

- Advertisement -
- Advertisement -

ಮಂಗಳೂರು: ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಯತೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಯತೀಶ್ ಶೆಟ್ಟಿ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪಣಿಕ್ಕರದವರಾಗಿದ್ದು ವಿದ್ಯಾರ್ಥಿ ದೆಸೆಯಲ್ಲಿ ವಿದ್ಯಾರ್ಥಿ ನಾಯಕರಾಗಿ ಬೆಳೆದವರು, ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮಂಗಳೂರು ವಿ ವಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ, ಎಬಿವಿಪಿ ತಾಲೂಕು ಸಂಚಾಲಕರಾಗಿ, ಜಿಲ್ಲಾ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ.

ಇವರು ಪ್ರಸ್ತುತ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿರುವ ಇವರು ಕರ್ನಾಟಕ ಹೈ ಕೋರ್ಟ್ ಬೆಂಗಳೂರಿನಲ್ಲಿ ವಕೀಲೀ ವೃತ್ತಿ ಆರಂಭಿಸಿದ್ದು ಪ್ರಸ್ತುತ ಬೆಳ್ತಂಗಡಿ ಮತ್ತು ಬೆಂಗಳೂರಿನಲ್ಲಿ ವಕೀಲರಾಗಿ ವೃತ್ತಿ ನಿರ್ವಹಿಸುತ್ತಿದ್ದಾರೆ.

- Advertisement -

Latest News

error: Content is protected !!