Friday, June 5, 2026
Homeಕರಾವಳಿಬಂಟ್ವಾಳ ಉಪತಹಶೀಲ್ದಾರ್ ಶ್ರೀಧರ್ ಕೋಡಿಜಾಲು ನಿಧನ

ಬಂಟ್ವಾಳ ಉಪತಹಶೀಲ್ದಾರ್ ಶ್ರೀಧರ್ ಕೋಡಿಜಾಲು ನಿಧನ

- Advertisement -
- Advertisement -

ಪುತ್ತೂರು: ಬಂಟ್ವಾಳ ತಾಲೂಕು ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ್ ಕೋಡಿಜಾಲು(46) ಹೃದಯಾಘಾತದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪುತ್ತೂರು ತಾಲೂಕಿನ ನಗರಸಭಾ ವ್ಯಾಪ್ತಿಯ ತೆಂಕಿಲ ಕೋಡಿಜಾಲು ನಿವಾಸಿಯಾಗಿದ್ದ ಶ್ರೀಧರ್ ಕಳೆದ 20 ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕರ್ತವ್ಯನಿರ್ವಹಿಸಿದ್ದರು.

ಕೆಲಕಾಲ ಜಿಲ್ಲಾಧಿಕಾರಿ ಕಚೇರಿಯಲ್ಲೂ ಕರ್ತವ್ಯ ನಿರ್ವಹಿಸಿದ್ದರು. ಉಪ್ಪಿನಂಗಡಿ ಕಂದಾಯ ನಿರೀಕ್ಷಕರಾಗಿದ್ದ ವೇಳೆ ಅವರು ಪದ್ದೋನ್ನತಿ ಹೊಂದಿ ಪುತ್ತೂರು ಉಪತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!