- Advertisement -
![]()
- Advertisement -
ಬಂಟ್ವಾಳ: ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆಯಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬನ ಮನೆಯಿಂದ ಸುಮಾರು 39 ಕೆಜಿ ಗಾಂಜಾವನ್ನುವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಪರ್ಲಿಯಾ ನಿವಾಸಿ ಅಹಮ್ಮದ್ ಸಾಬಿತ್ (30) ಬಂಧಿತ ಆರೋಪಿಯಾಗಿದ್ದು ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪಡಿಸಿಕೊಂಡಿರುವ ಗಾಂಜಾ ಮೌಲ್ಯ ಸುಮಾರು 20 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿ ಮೀನಿನ ಲಾರಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದು. ಗಾಂಜಾವನ್ನು ಆಂಧ್ರಪ್ರದೇಶದಿಂದ ತಂದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ.
- Advertisement -


