Saturday, July 5, 2025
Homeತಾಜಾ ಸುದ್ದಿನಕಲಿ ಚೆಕ್ ಬಳಸಿ ರಾಮ ಜನ್ಮಭೂಮಿ ಟ್ರಸ್ಟ್ ಖಾತೆಗೆ ಕನ್ನ: 6 ಲಕ್ಷ ರೂಪಾಯಿ ವಿತ್...

ನಕಲಿ ಚೆಕ್ ಬಳಸಿ ರಾಮ ಜನ್ಮಭೂಮಿ ಟ್ರಸ್ಟ್ ಖಾತೆಗೆ ಕನ್ನ: 6 ಲಕ್ಷ ರೂಪಾಯಿ ವಿತ್ ಡ್ರಾ

spot_img
- Advertisement -
- Advertisement -

ಲಖನೌ: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಖಾತೆಯಿಂದ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಜಧಾನಿ ಲಖನೌದ ಎರಡು ಬ್ಯಾಂಕುಗಳಿಂದ ಚೆಕ್ ಮೂಲಕ ಹಣ ವಿತ್ ಡ್ರಾ ಮಾಡಲಾಗಿದೆ. ಮೂರನೇ ಬಾರಿ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ, ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಲಾಗಿದೆ. ಇದಾದ ನಂತ್ರ ಪ್ರಕರಣ ಬೆಳಕಿಗೆ ಬಂದಿದೆ.

ಟ್ರಸ್ಟ್ ಖಾತೆಯಿಂದ ಹಣ ವಿತ್ ಡ್ರಾ ಮಾಡಿರುವ ವಿಷ್ಯ ಈಗ ಚರ್ಚೆಯಲ್ಲಿದೆ. ಕೊಟ್ವಾಲಿ ಅಯೋಧ್ಯೆಯಲ್ಲಿ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಮೂಲಗಳ ಪ್ರಕಾರ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ ನ ಖಾತೆಯಿಂದ ಸುಮಾರು 6 ಲಕ್ಷ ರೂಪಾಯಿಗಳನ್ನು ವಿತ್ ಡ್ರಾ ಮಾಡಲಾಗಿದೆ.

ಸೆಪ್ಟೆಂಬರ್ 1 ರಂದು ಲಖನೌದ ಬ್ಯಾಂಕಿನಿಂದ ಒಂದೂವರೆ ಲಕ್ಷ ರೂಪಾಯಿಗಳನ್ನು ಹಿಂಪಡೆಯಲಾಗಿದೆ. ಎರಡು ದಿನಗಳ ನಂತರ ಮೂರೂವರೆ ಲಕ್ಷ ರೂಪಾಯಿಗಳನ್ನು ಹಿಂಪಡೆಯಲಾಗಿದೆ. ಮೂರನೇ ಬಾರಿಗೆ ಲಖನೌದ ಬ್ಯಾಂಕ್ ಆಫ್ ಬರೋಡಾದಲ್ಲಿ 9 ಲಕ್ಷ 86 ಸಾವಿರ ಚೆಕ್ ವಿತ್ ಡ್ರಾ ಮಾಡುವ ಸಂದರ್ಭದಲ್ಲಿ ವಿಷ್ಯ ಟ್ರಸ್ಟ್ ಕಾರ್ಯದರ್ಶಿಗೆ ಮಾಹಿತಿ ನೀಡಲಾಗಿದೆ.

- Advertisement -
spot_img

Latest News

error: Content is protected !!