Thursday, June 4, 2026
Homeತಾಜಾ ಸುದ್ದಿನಾನು ಕೊಲಂಬೊಗೆ ಹೋಗಿದ್ದು ನಿಜ ಆದ್ರೆ ಕದ್ದು ಮುಚ್ಚಿ ಹೋಗಿಲ್ಲ : ಜಮೀರ್ ಅಹ್ಮದ್ ಗೆ...

ನಾನು ಕೊಲಂಬೊಗೆ ಹೋಗಿದ್ದು ನಿಜ ಆದ್ರೆ ಕದ್ದು ಮುಚ್ಚಿ ಹೋಗಿಲ್ಲ : ಜಮೀರ್ ಅಹ್ಮದ್ ಗೆ ಟಾಂಗ್ ಕೊಟ್ಟ ಹೆಚ್ಡಿಕೆ

- Advertisement -
- Advertisement -

ಬೆಂಗಳೂರು : ನಾನು ಮಾತ್ರ ಶ್ರೀಲಂಕಾಗೆ ಹೋಗಿಲ್ಲ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಬಂದಿದ್ದರು ಅನ್ನೋ ಜಮೀರ್ ಅಹ್ಮದ್ ಹೇಳಿಕೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ ಡಿಕೆ ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ ‘ಕೊಲಂಬೋ ಯಾತ್ರೆ’ ಮಾಡಿರಲಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ‘ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ’ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ. 2014 ರ ಜೂನ್​ನಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದೆವು. ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ’ ಎಂದಿರುವ ಎಚ್​ಡಿಕೆ, ವಿಮಾನ ಹತ್ತುವಾಗಲೂ ಮತ್ತು ವಾಪಸ್​ ಬಂದಾಗಲೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ. ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೇ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೇ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಟ್ವೀಟ್​ ಮೂಲಕ ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!