Sunday, June 7, 2026
Homeತಾಜಾ ಸುದ್ದಿಮತ್ತೆ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು, ಏಮ್ಸ್ ಆಸ್ಪತ್ರೆಗೆ ದಾಖಲು

ಮತ್ತೆ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು, ಏಮ್ಸ್ ಆಸ್ಪತ್ರೆಗೆ ದಾಖಲು

- Advertisement -
- Advertisement -

ನವದೆಹಲಿ:  ಎರಡು ವಾರಗಳ ಹಿಂದಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಅಮಿತಾ ಶಾ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದೆ. ಮತ್ತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆ ಸೇರಿದ್ದಾರೆ. ನಿನ್ನೆ ಮತ್ತೆ ಅವರಿಗೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ತಡರಾತ್ರಿ 11 ಗಂಟೆ ಸುಮಾರಿಗೆ ಅಮಿತ್ ಶಾ ದಾಖಲಾಗಿದ್ದು ಅವರನ್ನು ಸಿಎನ್ ಟವರ್ ನಲ್ಲಿ ಅಂದರೆ ವಿವಿಐಪಿಗಳಿಗೆ ಮೀಸಲಾಗಿರುವ ವ್ಯವಸ್ಥಾ ಕೊಠಡಿಯಲ್ಲಿ ಇರಿಸಲಾಗಿದೆ. ಏಮ್ಸ್ ನಿರ್ದೇಶಕ ಡಾ ರಂದೀಪ್ ಗುಲೆರಿಯಾ ಅವರು ಅಮಿತ್ ಶಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಪರಿಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಆಗಸ್ಟ್ 2ರಂದು ಕೋವಿಡ್-19 ಸೋಂಕು ಪತ್ತೆಯಾದ ನಂತರ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮತ್ತೆ ಅವರಿಗೆ ಸಮಸ್ಯೆ ತಲೆದೋರಿತ್ತು. ನಂತರ ಆಗಸ್ಟ್ 18ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾದರು. ಆಗಲೂ ಅವರಿಗೆ ಉಸಿರಾಟದ ಸಮಸ್ಯೆ ತಲೆದೋರಿತ್ತು.

- Advertisement -

Latest News

error: Content is protected !!