Friday, June 5, 2026
Homeತಾಜಾ ಸುದ್ದಿನಟಿ ರಾಗಿಣಿಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ, ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ

ನಟಿ ರಾಗಿಣಿಗೆ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ, ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು : ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವಂತ ನಟಿ ರಾಗಿಣಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು, ಎನ್ ಡಿ ಪಿ ಎಸ್ ನ್ಯಾಯಾಲಯದಲ್ಲಿ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದ್ರೇ ವಿಚಾರಣೆಯನ್ನು ಬಾಕಿ ಉಳಿಸಿ, ಸೆಪ್ಟೆಂಬರ್ 16ಕ್ಕೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಹೀಗಾಗಿ ಇನ್ನೂ ಎರಡು ದಿನ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ.

ಇಂದು ನಟಿ ರಾಗಿಣಿ ಅವರ ಸಿಸಿಬಿ ಬಂಧನ ಅಂತ್ಯವಾಗಲಿದೆ. ಹೀಗಾಗಿ ಪೊಲೀಸರು ನಟಿ ರಾಗಿಣಿ ಹಾಗೂ ಸಂಜನಾ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ಕರೆತಂದು ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಇದೇ ಸಂದರ್ಭದಲ್ಲಿ ನಟಿ ರಾಗಿಣಿ ಎನ್ ಡಿ ಪಿ ಎಸ್ ನ್ಯಾಯಾಲಯದಲ್ಲಿ ಸಲ್ಲಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಮತ್ತೆ ಸೆಪ್ಟೆಂಬರ್ 16ಕ್ಕೆ ವಿಚಾರಣೆ ಮುಂದೂಡಿದೆ. ಈ ಹಿನ್ನಲೆಯಲ್ಲಿ ಸದ್ಯಕ್ಕೆ ನಟಿ ರಾಗಿಣಿಗೆ ಬಿಡುಗಡೆ ಭಾಗ್ಯವಿಲ್ಲದಂತೆ ಆಗಿದೆ.

- Advertisement -

Latest News

error: Content is protected !!