Friday, June 5, 2026
Homeಕರಾವಳಿಮಂಜೇಶ್ವರ ಶಾಸಕರನ್ನು ವಜಾಗೊಳಿಸಿ, ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮಂಜೇಶ್ವರ ಶಾಸಕರನ್ನು ವಜಾಗೊಳಿಸಿ, ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

- Advertisement -
- Advertisement -

ಕಾಸರಗೋಡು: ಮಂಜೇಶ್ವರ ಶಾಸಕ ಎಂ. ಸಿ. ಖಮರುದ್ದೀನ್ ರಾಜೀನಾಮೆ ನೀಡಬೇಕು, ವಂಚನೆ ಆರೋಪಕ್ಕೆ ಸಿಲುಕಿರುವ ಈತ ಶಾಸಕನಾಗಿ ಮುಂದುವರಿಯುವುದು ಸರಿಯಲ್ಲ, ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಇಂದು ಕಾಸರಗೋಡು ತಾಲೂಕು ಕಚೇರಿಗೆ ಜಾಥಾ ನಡೆಸಿತು ಪ್ರತಿಭಟನಾನಿರತರು ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದಾಗ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.

ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದು, ಪೊಲೀಸರು ಮೂರು ಬಾರಿ ಜಲಫಿರಂಗಿ ಬಳಸಿದ್ದಾರೆ. ಪ್ರತಿಭಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕೆ . ಶ್ರೀಕಾಂತ್ ಉದ್ಘಾಟಿಸಿ, ಉಪಾಧ್ಯಕ್ಷ ಸದಾನಂದ ರೈ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಕಾರ್ಯದರ್ಶಿ ಎನ್. ಸತೀಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು , ಪಿ ಆರ್ ಸುನಿಲ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ ,ಹರೀಶ್ ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದರು .

- Advertisement -

Latest News

error: Content is protected !!