Saturday, June 28, 2025
Homeತಾಜಾ ಸುದ್ದಿಸಿಸಿಬಿಯಿಂದ ನೋಟಿಸ್ ಜಾರಿ ವಿಚಾರಕ್ಕೆ ಸಂಬಂಧಪಟ್ಟಂತೆ ದಿಗಂತ್- ಐಂದ್ರಿತಾ ಹೇಳಿದ್ದೇನು?

ಸಿಸಿಬಿಯಿಂದ ನೋಟಿಸ್ ಜಾರಿ ವಿಚಾರಕ್ಕೆ ಸಂಬಂಧಪಟ್ಟಂತೆ ದಿಗಂತ್- ಐಂದ್ರಿತಾ ಹೇಳಿದ್ದೇನು?

spot_img
- Advertisement -
- Advertisement -

ಬೆಂಗಳೂರು : ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ನೋಟಿಸ್​ ಜಾರಿ ಮಾಡಿರುವ ಸಿಬಿಬಿ, ನಾಳೆ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಲು ತಿಳಿಸಿದೆ.

ಈ ಬಗ್ಗೆ ಐಂದ್ರಿತಾ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು , “ಟೆಲಿಫೋನ್ ಮೂಲಕ ನಮಗೆ ನೋಟಿಸ್ ಸಿಕ್ಕಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲಿದ್ದೇವೆ, ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ” ಎಂದಿದ್ದಾರೆ.

ಎರಡು ದಿನಗಳ ಹಿಂದೆ ನಟಿ ಐಂದ್ರಿತಾ ರೇಯವರು ಶ್ರೀಲಂಕಾದ ಸಂದ ಕ್ಯಾಸಿನೋಗೆ ಹೋಗಿದ್ದ ವಿಡಿಯೋ, ಫೋಟೋ ವೈರಲ್‌ ಆಗಿತ್ತು. ಈ ವೇಳೆ ಈ ಪ್ರಕರಣದ ಆರೋಪಿ ಶೇಖ್‌ ಫಾಝಿಲ್‌ ಜೊತೆ ಇದ್ದ ಫೋಟೋಗಳು ಸಹ ಸಿಕ್ಕಿದ್ದು, ಈ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಇಬ್ಬರನ್ನೂ ಹೆಚ್ಚಿನ ವಿಚಾರಣೆಗಾಗಿ ಕರೆಯಲಾಗಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!